ಪ್ರಮುಖ ಸುದ್ದಿ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಗರ್ಭಿಣಿಯಾಗಿದ್ದಕ್ಕೆ ಕೊಲೆ ಮಾಡಿ ಸುಟ್ಟ ಪ್ರಿಯಕರ; ಪ್ರಿಯಕರನ ಬಂಧನ

ರಾಜ್ಯ(ಕಲಬುರಗಿ)ಸೆ.11:- ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ ಸುಟ್ಟು ಹಾಕಿದ ಘಟನೆ ಕಲಬುರ್ಗಿ ಜಿಲ್ಲೆ ಗಡಿಗೆ ಹೊಂದಿಕೊಂಡು ಪರಗಿ ಬಳಿ ನಡೆದಿದೆ.

ಕೊಲೆಯಾದ ವಿದ್ಯಾರ್ಥಿನಿಯನ್ನು ಕಲುಬುರ್ಗಿಯ ಸೀಬಾ ರಾಣಿ ಎಂದು ಗುರುತಿಸಲಾಗಿದೆ. ಐಡಿಯಲ್ ಫೈನ್ ಆರ್ಟ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಈಕೆಯನ್ನು ರಾಜಾಪುರದ ರವಿ ಪೂಜಾರಿ ಎಂಬಾತ ಪ್ರೀತಿಸಿದಂತೆ ನಾಟಕವಾಡಿ, ಅತ್ಯಾಚಾರ ಎಸಗಿ, ಗರ್ಭಿಣಿಯನ್ನಾಗಿಸಿದ್ದ ಎನ್ನಲಾಗಿದೆ. ಗರ್ಭಪಾತ ಮಾಡಿಸಲೆಂದು ಹೋದಾಗ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದ್ದು, ಆಕೆಯನ್ನು ಸುಟ್ಟು ಹಾಕಲಾಗಿದೆ.

ಗರ್ಭಪಾತ ಮಾಡಿಸಲೆಂದು ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಿದ್ದ. ಈ ವೇಳೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದರಿಂದ, ಆಕೆಯ ಶವವನ್ನು ಕಾರಿನಲ್ಲಿ 37 ಗಂಟೆಗಳ ಕಾಲ ಸುತ್ತಿಸಿ,ಅದನ್ನು ತೆಲಂಗಾಣ ಗಡಿಯಲ್ಲಿ ಸುಟ್ಟು ಹಾಕಿದ್ದಾನೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ.

ಕಾಲೇಜಿಗೆ ಹೋಗಿದ್ದ ಸೀಬಾ ರಾಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಕಿಡ್ನ್ಯಾಪ್ ಆಗಿರಬೇಕೆಂದು ಪೋಷಕರು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ ಆಕೆಯ ದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆವಿ ಡೋಸ್ ಇಂಜೆಕ್ಷನ್ ಕೊಡಿಸಿದ್ರಿಂದ ಸೀಬಾ ರಾಣಿ ಸಾವನ್ನಪ್ಪಿದ್ದಾಳೆ. ಇದಕ್ಕೆ ಕಾರಣನಾದ ಯುವಕ, ವೈದ್ಯರು, ಆಸ್ಪತ್ರೆ ಸಿಬ್ಬಂದಿ ಎಲ್ಲರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಗಳು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಬ್ರಹ್ಮಪುರ ಪೊಲೀಸರು ರವಿ ಪೂಜಾರಿ ಎಂಬ ಯುವಕನನ್ನು ಬಂಧಿಸಿದ್ದಾರೆ. ಬಂಧಿಸಿದ ನಂತರ ಗರ್ಭಪಾತದ ವೇಳೆ ಸಾವನ್ನಪ್ಪಿದ ಮತ್ತು ಶವವನ್ನು ಕಾರಿನಲ್ಲಿ ಹಾಕಿಕೊಂಡು ತೆಲಂಗಾಣ ಗಡಿಯಲ್ಲಿ ನಿರ್ಜನ ಪ್ರದೇಶದಲ್ಲಿ ಸುಟ್ಟು ಹಾಕಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾನೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಮತ್ತಷ್ಟು ಜನರ ಬಂಧನವಾಗೋ ಸಾಧ್ಯತೆಯಿದೆ. ಅತ್ತ ಕಡೆ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಪ್ರೀತಿಸಿದವನಿಂದ ಮೋಸಹೋದ ಯುವತಿ, ಸುಟ್ಟು ಬೂದಿಯಾಗಿದ್ದು, ಸುದ್ದಿ ತಿಳಿದ ಕುಟುಂಬದ ಸದಸ್ಯರ ರೋದನ ಮುಗಿಲು ಮುಟ್ಟುವಂತೆ ಮಾಡಿದೆ. ಸೂಕ್ತ ತನಿಖೆ ನಡೆಸಿ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.‌ (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: