ಪ್ರಮುಖ ಸುದ್ದಿ

ತನಗೆ ಸಮನ್ಸ್ ತಲುಪಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳುವ ಹಾಗೆಯೇ ಇಲ್ಲ : ಜಾಹೀರಾತು ಪ್ರಕಟಿಸುವ ಮೂಲಕ ಸಮನ್ಸ್ ಜಾರಿಗೊಳಿಸಿದ ಹೈಕೋರ್ಟ್

ರಾಜ್ಯ(ಹಾಸನ)ಸೆ.11:-  ಲೋಕಸಭೆ ಚುನಾವಣೆ ವೇಳೆ ನಾಮಪತ್ರದೊಂದಿಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ‌ ನೀಡಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ  ಸೆ.30ರಂದು ವಿಚಾರಣೆಗೆ ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದ್ದು, ತನಗೆ ಸಮನ್ಸ್ ತಲುಪಿಲ್ಲ ಎಂದು ಸಂಸದರು ಹೇಳುವಂತೆಯೇ ಇಲ್ಲ.

ದೂರುದಾರರಾದ ಮಾಜಿ ಸಚಿವ ಎ.ಮಂಜು ಹಾಗೂ ವಕೀಲ ಜಿ.ದೇವರಾಜೇಗೌಡ ಅವರು ಪ್ರತ್ಯೇಕವಾಗಿ ದಾಖಲಿಸಿರುವ ಪ್ರಕರಣಗಳ ವಿಚಾರಣೆಗೆ ಸೆ.30ರಂದು ಬೆಳಿಗ್ಗೆ 10.30ಕ್ಕೆ ಖುದ್ದಾಗಿ ಇಲ್ಲವೇ ವಕೀಲರ ಮೂಲಕ ಹಾಜರಾಗುವಂತೆ ಹೈ ಕೋರ್ಟ್ ಸಮನ್ಸ್ ನಲ್ಲಿ ಸೂಚಿಸಿದೆ.

ಈ ಹಿಂದೆ ತಮಗೆ ಪ್ರಕರಣ ಸಂಬಂಧ ನ್ಯಾಯಾಲಯದ ಸಮನ್ಸ್ ತಲುಪಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದರು. ಈ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್ ಸಂಸದರಿಗೆ ಪತ್ರಿಕೆಯ ಜಾಹೀರಾತು ಮೂಲಕ ಸಮನ್ಸ್ ಜಾರಿ ಮಾಡಲು ಅನುಮತಿ ನೀಡಿತ್ತು.

ಅದರಂತೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ನೀಡಲಾಗಿದ್ದು, ಇದರಿಂದ 30ರಂದು ಪ್ರಜ್ವಲ್ ಇಲ್ಲವೇ ಅವರ ಪರವಾಗಿ ವಕೀಲರು ನ್ಯಾಯಾಧೀಶರ ಮುಂದೆ ಹಾಜರಾಗಲೇಬೇಕಾಗಲಿದೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: