ಪ್ರಮುಖ ಸುದ್ದಿ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನಾ ರ್ಯಾಲಿ

ರಾಜ್ಯ(ಬೆಂಗಳೂರು)ಸೆ.11:- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಒಕ್ಕಲಿಗರ ಸಮುದಾಯ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ.

ನಗರದ ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂಪಾರ್ಕ್ ವರೆಗೆ ನಡೆಯುವ ಪ್ರತಿಭಟನಾ ರ್ಯಾಲಿ ಆರಂಭವಾಗಿದ್ದು, ಕಾಂಗ್ರೆಸ್, ಜೆಡಿಎಸ್ ನಾಯಕರು ಸೇರಿ ಸಾವಿರಾರು ಮಂದಿ ಪಾಲ್ಗೊಂಡಿದ್ದಾರೆ.  ಕನ್ನಡಪರ ಸಂಘಟನೆಗಳು, ಒಕ್ಕಲಿಗ ಸಮುದಾಯದ ಹಲವಾರು ಸಂಘಟನೆಗಳು, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮೆರವಣಿಗೆಯಲ್ಲಿ ಭಾಗವಹಿಸಿವೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಮಲಿಂಗರೆಡ್ಡಿ, ಮಾಜಿ ಸಚಿವ ಕೃಷ್ಣಭೈರೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕಿ ಸೌಮ್ಯರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: