ಮೈಸೂರು

ಗುತ್ತಿಗೆದಾರರ ಹಿತ ಕಾಯಲು ಸರ್ಕಾರ ಬದ್ಧ : ಸಚಿವ ವಿ. ಸೋಮಣ್ಣ

ಮೈಸೂರು, ಸೆ.11 :-  ದಸರಾ ಕಾಮಗಾರಿಗಳನ್ನು ನಿರ್ವಹಿಸಲು ಮಹಾನಗರ ಪಾಲಿಕೆಯಲ್ಲಿ ಪ್ರತ್ಯೇಕ ಬ್ಯಾಂಕ್ ಖಾತೆ ತೆರೆದು ಆ ಖಾತೆಯಲ್ಲಿ ನಿದಗಿತ ಮೊತ್ತವನ್ನು ಮೀಸಲಿಡಲು ಕ್ರಮ ಕೈಗೊಳ್ಳುವುದಾಗಿ ವಸತಿ ಸಚಿವರೂ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು   ತಿಳಿಸಿದರು.
ಇಂದು ಮೈಸೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಪಾಲಿಕೆ ಗುತ್ತಿಗೆದಾರರ ಸಭೆಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ ನೀಡಬೇಕಿರುವ 10 ಕೋಟಿ ಬಾಕಿ ಸೇರಿದಂತೆ ಈಗ ಕೈಗೆತ್ತಿಕೊಂಡಿರುವ 5 ಕೋಟಿ ಸೇರಿ ಒಟ್ಟು 15 ಕೋಟಿ ಹಣವನ್ನು ಶೀಘ್ರ ಬಿಡುಗಡೆಗೆ ಮಾಡಲಾಗುವುದು ಎಂದರು.
ಗುತ್ತಿಗೆದಾರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ನಗರದ ಪಾರಂಪರಿಕತೆಗೆ ಧಕ್ಕೆ ಬಾರದ ರೀತಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳಿ ಎಂದು ಗುತ್ತಿಗೆದಾರರಿಗೆ ಕಿವಿಮಾತು ಹೇಳಿದರು.
ಸಭೆಯಲ್ಲಿ ಮೇಯರ್ ಪುಷ್ಪಲತ ಜಗನ್ನಾಥ್, ಉಪಮೇಯರ್ ಷಫಿ ಅಹ್ಮದ್, ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ ಮೊದಲಾದವರು ಉಪಸ್ಠಿತರಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: