ಮೈಸೂರು

ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ

ತಮಿಳುನಾಡಿಗೆ  ಕಬಿನಿ ಜಲಾಶಯದಿಂದ ಪ್ರತಿದಿನ ಹರಿಸುತ್ತಿರುವ 2,ಸಾವಿರ ಕ್ಯೂಸೆಕ್ ನೀರನ್ನು ಈ ಕೂಡಲೇ ನಿಲ್ಲಿಸಬೇಕು ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬೆಳೆ ನಷ್ಟ ಪರಿಹಾರ ಕೊಡಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ವತಿಯಿಂದ ತಟ್ಟೆ  ಮತ್ತು ಲೋಟಗಳನ್ನು ಹಿಡಿದು ಭಿಕ್ಷೆ ಬೇಡುವ ಚಳುವಳಿ ನಡೆಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಚಳುವಳಿಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕಬಿನಿ ಅಚ್ಚುಕಟ್ಟು ಪ್ರದೇಶದಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು. ತಮಿಳುನಾಡಿಗೆ ನೀರು ಹರಿಸಿದಲ್ಲಿ ನಾವು ಭಿಕ್ಷೆ ಎತ್ತಬೇಕಾಗುತ್ತಿದೆ ಎನ್ನುವುದನ್ನು ಸಾಂಕೇತಿಕವಾಗಿ ತೋರಿಸಿದರು.

ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ಅಧ್ಯಕ್ಷ  ಬಿ.ಎ.ಶಿವಶಂಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು.

Leave a Reply

comments

Related Articles

error: