ಮೈಸೂರು

ಯುವ ಸಂಭ್ರಮ ಉದ್ಘಾಟನೆಗೆ ಗೋಲ್ಡನ್ ಸ್ಟಾರ್ ಗಣೇಶ್ ಗೆ ಅಧಿಕೃತ ಆಹ್ವಾನ

ಮೈಸೂರು,ಸೆ.13:- ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ಸಂಭ್ರಮ ಮತ್ತು ಯುವ ದಸರಾ ಉಪಸಮಿತಿ ವತಿಯಿಂದ ಸೆ.17ರಿಂದ 25ರವರೆಗೆ 9ದಿನಗಳ ಕಾಲ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಪ್ರತಿದಿನ ಸಂಜೆ 5.30ರಿಂದ 10.30ರವರೆಗೆ  ಯುವ ಸಂಭ್ರಮ ಆಯೋಜಿಸಲಾಗಿದ್ದು,  ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.

ಯುವ ಸಂಭ್ರಮ ಉದ್ಘಾಟನೆಯನ್ನು ಕನ್ನಡದ ಖ್ಯಾತ ಚಲನಚಿತ್ರನಾಯಕ ನಟ ಗೋಲ್ಡನ್ ಸ್ಟಾರ್ ಗಣೇಶ್  ನೆರವೇರಿಸಲಿದ್ದಾರೆ. ಅದಕ್ಕಾಗಿ ಅವರ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಆಹ್ವಾನಿಸಲಾಯಿತು.

ಈ ಸಂದರ್ಭ ಯುವ ದಸರಾ ಉಪ ಸಮಿತಿ ಕಾರ್ಯಾಧ್ಯಕ್ಷರಾದ ಲಿಂಗಣ್ಣಯ್ಯ, ಕಾರ್ಯದರ್ಶಿ ಸೋಮಶೇಖರ್ ಇದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: