ಪ್ರಮುಖ ಸುದ್ದಿಮೈಸೂರು

ದಿ.18ರಂದು ಬಸವರಾಜ ಕಟ್ಟಿಮನಿ ಪ್ರತಿಷ್ಠಾನದಿಂದ ವಿಚಾರ ಸಂಕಿರಣ

ಮೈಸೂರು,ಸೆ.13: ಬಸವರಾಜ ಕಟ್ಟಿಮನಿ ಪ್ರತಿಷ್ಠಾನ ಮತ್ತು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಸೆ. ದಿ. 18.ರಂದು ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ ಎಂದು ಬಸವರಾಜ ಕಟ್ಟಿಮನಿ ಪ್ರತಿಷ್ಟಾನದ ಸದಸ್ಯ‌ ಸಂಚಾಲಕರಾದ ದುರ್ಗಾ ದಾಸ್ ತಿಳಿಸಿದರು,

ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ‌ ಅವರು ಬಸವರಾಜ ಕಟ್ಟಿಮನಿಯವರ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ಸರಕಾರ ಅವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಬೆಳಗಾವಿಯಲ್ಲಿ ಸ್ಥಾಪಿಸಿದೆ . ಈ ಪ್ರತಿಷ್ಠಾನದ ಮೂಲಕ ಕಟ್ಟಿಮನಿಯವರ ಸಾಹಿತ್ಯದ ಅಧ್ಯಯನ , ವಿಮರ್ಶೆ ಮತ್ತು ಸಂಶೋಧನ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ನಡೆಸಲಾಗುತ್ತಿದೆ, ಇದರ ಭಾಗವಾಗ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ದಿ18ರ ಬೆಳಿಗ್ಗೆ 10.30ಕ್ಕೆ ಕುಲಪತಿಗಳಾದ ಪ್ರೊ . ವಿದ್ಯಾಶಂಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ . ಮಲ್ಲಿಕಾರ್ಜುನ ಹಿರೇಮಠ ಅವರು ಅಧ್ಯಕ್ಷತೆ ವಹಿಸಲಿದ್ದು , ಹಿರಿಯ ವಿದ್ವಾಂಸರಾದ ಪ್ರೊ . ಓ . ಎಲ್ . ನಾಗಭೂಷಣಸ್ವಾಮಿಯವರು ಆಶಯ ನುಡಿಗಳನ್ನಾಡಲಿದ್ದಾರೆ  ಎಂದು ತಿಳಿಸಿದರು.

ಖ್ಯಾತ ಗಾಯಕರಾದ ಬರ್ಟಿ ಒಲೆವೆರಾ ಕ್ರಾಂತಿಗೀತೆಗಳನ್ನು ಹಾಡಲಿದ್ದಾರೆ .  ವಿಚಾರ ಸಂಕಿರಣದಲ್ಲಿ ಭಾಗವಹಿಸುವ ಅಧ್ಯಾಪಕರು , ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಭಾಗವಹಿಸಿದ ಕುರಿತು ಪ್ರತಿಷ್ಠಾನದಿಂದ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಡಾ. ಕವಿತಾ ರೈ ಸೇರಿದಂತೆ ಹಲವರು ಭಾಗಿಯಾಗಿದ್ದರು.

Leave a Reply

comments

Related Articles

error: