ಸುದ್ದಿ ಸಂಕ್ಷಿಪ್ತ

ಸೆ.14ಕ್ಕೆ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ

ಮೈಸೂರು,ಸೆ.13-ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶೈಕ್ಷಿಕ್ ಸಂಘದ ಸಂಯುಕ್ತಾಶಯದಲ್ಲಿ ಸೆ.14 ರಂದು ಸಂಜೆ 4 ಗಂಟೆಗೆ ನಗರದ ಶ್ರೀ ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮಾಜಿ ವಿಧಾನಪರಿಷತ್ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಉದ್ಘಾಟಿಸಲಿದ್ದಾರೆ. ಸಂಸ್ಕೃತಿ ಚಿಂತಕ ಶಂಕರ್ ದೇವನೂರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಸಿಂಧನಕೇರಾ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಂದೀಶ್ ಉಪಸ್ಥಿತರಿರಲಿದ್ದಾರೆ. (ಎಂ.ಎನ್)

Leave a Reply

comments

Related Articles

error: