ಸುದ್ದಿ ಸಂಕ್ಷಿಪ್ತ

ಸೆ. 14ಕ್ಕೆ ಎಂ.ವೆಂಕಟಕೃಷ್ಣಯ್ಯನವರ ಜಯಂತ್ಯುತ್ಸವ, ಪ್ರಶಸ್ತಿ ಪ್ರದಾನ

ಮೈಸೂರು,ಸೆ.13-ಎಂ.ವೆಂಕಟಕೃಷ್ಣಯ್ಯನವರ 175ನೇ ಜಯಂತ್ಯುತ್ಸವ ಹಾಗೂ ಅನಾಥಾಲಯದ ಎಂ.ವೆಂಕಟಕೃಷ್ಣಯ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ. 14 ರಂದು ಸಂಜೆ 5 ಗಂಟೆಗೆ ಕೃಷ್ಣಮೂರ್ತಿಪುರಂನಲ್ಲಿರುವ ರಾಮಮಂದಿರದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇಸ್ರೋದ ನಿವೃತ್ತ ವಿಜ್ಞಾನಿ ಡಾ.ಟಿ.ಜಿ.ಕೆ.ಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ವಿ.ವಿ.ಭಟ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಅನಾಥಾಲಯದ ಅಧ್ಯಕ್ಷ ಆರ್.ಗುರು ಅಧ್ಯಕ್ಷತೆ ವಹಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: