ಸುದ್ದಿ ಸಂಕ್ಷಿಪ್ತ

ಸೆ.14ಕ್ಕೆ ಮಹಿಳಾ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಚಾಂಪಿಯನ್‌ಶಿಪ್

ಮೈಸೂರು,ಸೆ.13-ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಎನ್ಐಇ ಪ್ರಥಮ ದರ್ಜೆ ಕಾಲೇಜು ವತಿಯಿಂದ ಸೆ. 14 ರಂದು ಬೆಳಿಗ್ಗೆ 9 ಗಂಟೆಗೆ ವಿಶ್ವವಿದ್ಯಾನಿಲಯದ ಸ್ಪೋರ್ಟ್ಸ್ ಪೆವಿಲಿಯನ್ ನಲ್ಲಿ ವಿಶ್ವವಿದ್ಯಾಲಯದ ಇಂಟರ್ಕಾಲೇಜಿಯೇಟ್ ಚಾಮುಂಡಿ ವಲಯ ಮಹಿಳಾ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಚಾಂಪಿಯನ್‌ಶಿಪ್ ಅನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ್ ರಾಜೇ ಅರಸ್ ಆಗಮಿಸಲಿದ್ದಾರೆ. ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ, ಡಾ.ಶ್ರೀಪತಿ ಪುಂಚಿತಾಯ ಉಪಸ್ಥಿತರಿರಲಿದ್ದಾರೆ. (ಎಂ.ಎನ್)

Leave a Reply

comments

Related Articles

error: