ಮೈಸೂರು

9ನೇ ಏಷ್ಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್‍ಶಿಪ್‍ನಲ್ಲಿ 3 ಚಿನ್ನದ ಪದಕಗಳನ್ನು ಪಡೆದ ಯೋಗಪಟು ಖುಷಿ.ಹೆಚ್

ರಾಜ್ಯ(ಮಡಿಕೇರಿ)ಸೆ.13:- ಮೈಸೂರು ನಗರದ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಖುಷಿ.ಹೆಚ್ ಅವರು ದಕ್ಷಿಣ ಕೊರಿಯಾದಲ್ಲಿ ಸೆಪ್ಟೆಂಬರ್ 5 ರಿಂದ 8ನೇ ತಾರೀಖಿನವರೆಗೆ ನಡೆದ 2019ನೇ ವರ್ಷದ 9ನೇ ಏಷ್ಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ 14 ರಿಂದ 17 ವರ್ಷದವರ ಜೂನಿಯರ್ ಬಾಲಕಿಯರ ವಿಭಾಗದಲ್ಲಿ ಭಾಗವಹಿಸಿ ಮೂರು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.
ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರಾದ ಎಚ್. ಸತ್ಯಪ್ರಸಾದ್ ಮತ್ತು ಬೋಧಕ ವೃಂದ ಅಭಿನಂದಿಸಿದೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: