
ಪ್ರಮುಖ ಸುದ್ದಿ
ಅ.18 ರ ಶುಕ್ರವಾರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ಕಾವೇರಿ ತೀರ್ಥೋದ್ಭವ
ರಾಜ್ಯ(ಮಡಿಕೇರಿ) ಸೆ.14 :- ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಜರುಗುವ ಶ್ರೀ ಕಾವೇರಿ ತುಲಾ ಸಂಕ್ರಮಣದ ಕಾಲ ಅ.18 ರ ಶುಕ್ರವಾರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ಶ್ರೀ ಮೂಲ ಕಾವೇರಿ ತೀರ್ಥೋದ್ಭವವಾಗಲಿದೆ ಎಂದು ಶ್ರೀಭಗಂಡೇಶ್ವರ, ತಲಕಾವೇರಿ ದೇವಾಲಯದ ಪ್ರಕಟಣೆ ತಿಳಿಸಿದೆ.
ಅಂದು ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ಕಾವೇರಿ ತಿರ್ಥೊದ್ಭವವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆ.27 ರಂದು ಬೆ.9.15 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.5 ರಂದು ಬೆ.8.45 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.15 ರಂದು 12.05 ಗಂಟೆಗೆ ಧನುರ್ ಲಗ್ನದಲ್ಲಿ ಅಕ್ಷಯಪಾತ್ರೆ ಹಾಗೂ ಸಂಜೆ 4.31 ಗಂಟೆಗೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಯನ್ನು ಇಡುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ಮಾಹಿತಿ ನೀಡಿದೆ. (ಕೆಸಿಐ,ಎಸ್.ಎಚ್)