ಪ್ರಮುಖ ಸುದ್ದಿ

ಸೆ.17 : ವಿಶ್ವಕರ್ಮ ಜಯಂತ್ಯುತ್ಸವದ ಪ್ರಯುಕ್ತ ವಿಶೇಷ ಪೂಜೆ

ಮಡಿಕೇರಿ ಸೆ. 15 : -ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆ.17 ರಂದು ವಿಶ್ವಕರ್ಮ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ.
ಶ್ರೀವಿಶ್ವಕರ್ಮ ಪೂಜೆ : ವಿಶ್ವಕರ್ಮ ಜಯಂತ್ಯುತ್ಸವದ ಪ್ರಯುಕ್ತ ಪೂರ್ವ ಭಾವಿಯಾಗಿ ಕೊಡಗು ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 8.30 ಗಂಟೆಗೆ ಶ್ರೀ ವಿಶ್ವಕರ್ಮ ಪೂಜೆ ನಡೆಯಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಕೋರಿದ್ದಾರೆ.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಜಯಂತ್ಯುತ್ಸವ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಜಿ.ಪಂ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್.ಲೋಕೇಶ್‍ಸಾಗರ್, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಎಸ್.ಜೆ. ದೇವದಾಸ್, ಸರಸ್ವತಿ ಡಿಎಡ್ ಕಾಲೇಜಿನ ಪ್ರಾಂಶುಪಾಲ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: