ಪ್ರಮುಖ ಸುದ್ದಿ

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಇಂದು ಜೈಲಾ ? ಜಾಮೀನಾ?

ದೇಶ(ನವದೆಹಲಿ)ಸೆ.17:-  ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು,ಅವರಿಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎನ್ನುವುದು ಇಂದು ಗೊತ್ತಾಗಲಿದೆ.

ಡಿ.ಕೆ‌. ಶಿವಕುಮಾರ್ ಅವರಿಗೆ ಯಾವ ಕಾರಣಕ್ಕೂ ಜಾಮೀನು ನೀಡಬಾರದೆಂದು ಸೋಮವಾರ ಜಾರಿ ನಿರ್ದೇಶನಾಲಯದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇಂದು ಡಿ.ಕೆ. ಶಿವಕುಮಾರ್ ಅವರಿಗೆ ಜಾಮೀನು ನೀಡಬೇಕೆಂದು ಅವರ ವಕೀಲರು ಮನವಿ ಮಾಡಿಕೊಳ್ಳಲಿದ್ದಾರೆ. ವಾದ-ಪ್ರತಿವಾದ ಆಲಿಸಲಿರುವ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್, ಡಿ.ಕೆ. ಶಿವಕುಮಾರ್ ಅವರಿಗೆ ಜಾಮೀನು ನೀಡುತ್ತಾರೋ ಅಥವಾ ಜೈಲಿಗೆ ಕಳುಹಿಸುತ್ತಾರೋ ಎಂಬುದನ್ನು ಕಾದುನೋಡಬೇಕಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: