ಕರ್ನಾಟಕ

ಮೋದಿ ದೇಶದ ಎರಡನೇ ಸರ್ದಾರ್ ವಲ್ಲಭಭಾಯ್ ಪಟೇಲ್: ಸಿಎಂ ಬಿ.ಎಸ್.ಯಡಿಯೂರಪ್ಪ ಬಣ್ಣನೆ

ಕಲಬುರಗಿ,ಸೆ.17-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ದೇಶದ ಎರಡನೇ ಸರ್ದಾರ್ ವಲ್ಲಭಭಾಯ್ ಪಟೇಲ್ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಇಂದು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡುವ ವೇಳೆ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ನಿಜಾಮರ ಕಪಿಮುಷ್ಠಿಯಿಂದ ಮುಕ್ತಿಗೊಳಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಮಾರ್ಗದಲ್ಲೇ ಹೊರಟಿರುವ ಮೋದಿ ಅವರು ದೇಶದ ಎರಡನೇ ಸರ್ದಾರ್ ವಲ್ಲಭಭಾಯ್ ಪಟೇಲ್ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಬಡತನದ ವಿರುದ್ಧ ಸಮರ ಸಾರಿದ್ದಾರೆ. ಈ ನಿಟ್ಟಿನಲ್ಲಿ ಪಟೇಲರಂತೆಯೇ ಮೋದಿಯವರೂ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ಅಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು. ಈ ಪ್ರದೇಶವನ್ನು ಹೇಗೆಲ್ಲ ಅಭಿವೃದ್ಧಿ ಪಡಿಸಲಾಗುವುದು ಎನ್ನುವುದನ್ನು ನೋಡುತ್ತಾ ಹೋಗಿ ಎಂದರಲ್ಲದೆ, ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಲು ದೊರೆತ ಅವಕಾಶ ತಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದರು. (ಎಂ.ಎನ್)

Leave a Reply

comments

Related Articles

error: