ಕ್ರೀಡೆಪ್ರಮುಖ ಸುದ್ದಿ

ರಾಷ್ಟ್ರೀಯ ಹಾಕಿ ಟೂರ್ನಿ : ಜ.ತಿಮ್ಮಯ್ಯ ಪಬ್ಲಿಕ್ ಶಾಲೆಗೆ ಗೆಲುವು

ರಾಜ್ಯ(ಮಡಿಕೇರಿ) ಸೆ. 18 : – ಒಡಿಸ್ಸಾದ ರೂರ್ಕೆಲದಲ್ಲಿ ನಡೆದ ರಾಷ್ಟ್ರೀಯ ಹಾಕಿ ಟೂರ್ನಿಯಲ್ಲಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ತೋರುವ ಮೂಲಕ ಚಾಂಪಿಯನ್‍ಶಿಪ್ ಪಡೆದುಕೊಂಡಿದ್ದಾರೆ.
ಮೋನಿತ್ ಮೊಣ್ಣಪ್ಪ, ಕುಶನ್ ಕಾರ್ಯಪ್ಪ, ಟಿ.ಆರ್.ಅಶ್ವಥ್ ಹಾಗೂ ತನುಶ್ ಕುಟ್ಟಯ್ಯ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳು.
ಕಾಲ್ಸ್‍ನಲ್ಲಿ ನಡೆದ 2019-20ನೇ ಸಾಲಿನ 17 ವರ್ಷ ವಯೋಮಿತಿಯ ಐಸಿಎಸ್‍ಇ ಶಾಲೆಗಳ ಪ್ರಾಂತೀಯ ಮಟ್ಟದ ಅಂತರ್ಶಾಲಾ ಹಾಕಿ ಪಂದ್ಯಾವಳಿಯಲ್ಲಿ ಶಾಲೆಯ ವಿದ್ಯಾರ್ಥಿಗಳು ಮೂರನೇ ಸ್ಥಾನವನ್ನು ಪಡೆದರು. ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದರು.
ಪಂದ್ಯದಲ್ಲಿ ಆಯ್ಕೆ ಸಮಿತಿಯ ಗಮನ ಸೆಳೆದ ತನುಶ್ ಕುಟ್ಟಯ್ಯ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: