ಮೈಸೂರು

ಜೆಎಸ್‍ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು  ಮತ್ತು ಸಿಎಫ್‍ಟಿಆರ್‍ಐ ನಡುವೆ  ಒಪ್ಪಂದ

ಮೈಸೂರು,ಸೆ.18:- ಮೈಸೂರಿನ ಬಿಎನ್ ರಸ್ತೆಯಲ್ಲಿರುವ  ಜೆಎಸ್‍ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಸಿಎಸ್‍ಐಆರ್-ಸಿಎಫ್‍ಟಿಆರ್‍ಐ ನಡುವೆ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಸಹಕಾರವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಜೆಎಸ್‍ಎಸ್ ಕಾಲೇಜು ಯುಜಿಸಿಯ ದೀನ್ ದಯಾಳ್ ಉಪಾಧ್ಯಾಯ ಕೌಶಲ್ ಕೇಂದ್ರದಡಿಯಲ್ಲಿ ಆಹಾರ ಸಂಸ್ಕರಣೆ ಮತ್ತು ಎಂಜಿನಿಯರಿಂಗ್‍ನಲ್ಲಿ ಸ್ನಾತಕೋತ್ತರ ಮತ್ತು ಸ್ನಾತಕ ಪದವಿ ಕೋರ್ಸ್‍ಗಳನ್ನು ನಡೆಸುತ್ತಿದೆ. ಈ ಒಪ್ಪಂದದಿಂದ ವಿದ್ಯಾರ್ಥಿಗಳು ಸಿಎಸ್‍ಐಆರ್ – ಸಿಎಫ್‍ಟಿಆರ್‍ಐನ ಪ್ರಯೋಗಾಲಯಗಳಲ್ಲಿ ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಲಕರಣೆಗಳನ್ನು ಉಪಯೋಗಿಸಿಕೊಂಡು ಪಠ್ಯಕ್ರಮದ ಕೌಶಲ್ಯ ತರಬೇತಿಯನ್ನು ಪಡೆಯಬಹುದಾಗಿದೆ.

ಸಿಎಸ್‍ಐಆರ್-ಸಿಎಫ್‍ಟಿಆರ್‍ಐ ಪರವಾಗಿ ನಿರ್ದೆಶಕರಾದ ಡಾ. ಕೆ.ಎಸ್.ಎಮ್.ಎಸ್. ರಾಘವರಾವ್ ಮತ್ತು ಜೆಎಸ್‍ಎಸ್ ಕಾಲೇಜಿನ ಪರವಾಗಿ ಪ್ರಾಂಶುಪಾಲರಾದ ಪ್ರೊ. ಎಂ. ಮಹದೇವಪ್ಪ ಒಪ್ಪಂದಕ್ಕೆ ಸಹಿ ಮಾಡಿದರು.

ಈ ಸಂದರ್ಭದಲ್ಲಿ ಜೆಎಸ್‍ಎಸ್ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕರಾದ ಪ್ರೊ. ಬಿ.ವಿ. ಸಾಂಬಶಿವಯ್ಯ, ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕರಾದ ಪ್ರೊ. ಮೊರಬದ ಮಲ್ಲಿಕಾರ್ಜುನ, ಸಿಎಫ್‍ಟಿಆರ್‍ಐನ ಮಣಿಲಾಲ್ ಮೊದಲಾದವರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: