ಮೈಸೂರು

ಎರಡು ದಿನದ‌ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ : ಸೆ.20ಕ್ಕೆ ಚಾಲನೆ

ಮೈಸೂರು,ಸೆ.18:-  ಕೈಮಗ್ಗ ಮತ್ತು ಜವಳಿ ಇಲಾಖೆ, ಮೈಸೂರು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡ ಉದ್ಯಮಿದಾರರ ಸಂಘದಿಂದ ನೂತನ ಜವಳಿ ನೀತಿ ಅಡಿ ಎರಡು ದಿನದ‌ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಜನಾರ್ದನ ತಿಳಿಸಿದರು.

ವಾರ್ತಾ ಇಲಾಖೆಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೆಚ್.ಡಿ.ಕೋಟೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೆ.20ರಂದು ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ‌ ವಿ.ಸೋಮಣ್ಣ ಉದ್ಘಾಟಿಸಲಿದ್ದು, ಶಾಸಕ ಸಿ.ಅನಿಲ್ ಕುಮಾರ್ ಅಧ್ಯಕ್ಷತೆ‌ ವಹಿಸಲಿದ್ದಾರೆ. ಇತರೆ ಜನಪ್ರತಿನಿಧಿಗಳು ಅಧಿಕಾರಿಗಳು, ಉದ್ಯಮಿದಾರರು ಭಾಗವಹಿಸಲಿದ್ದಾರೆಂದು  ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಪ್ರವರ್ಧನಾಧಿಕಾರಿ ಬಿ.ಎಂ.ಒಡೆಯರ್ ಮೈಸೂರು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡ ಉದ್ಯಮಿದಾರರಸಂಘ ಅಧ್ಯಕ್ಷರಾದ ಆರ್.ಮಂಜುನಾಥ್‌  ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: