ಪ್ರಮುಖ ಸುದ್ದಿ

ವಿರಾಜಪೇಟೆ ಜವಾನ್ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ

ರಾಜ್ಯ( ಮಡಿಕೇರಿ) ಸೆ.19 :- ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ವಿರಾಜಪೇಟೆ ಪಟ್ಟಣದ ಅಮರ ಜವಾನ್ ಸ್ಮಾರಕದಲ್ಲಿ ನಡೆಯಿತು.
ಯೋಧರ ಸ್ಮಾರಕ ಸ್ತಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿಗಳಾದ ಕರ್ನಲ್ ಚೋಂದಂಡ ಕಾಶಿ ಅಯ್ಯಪ್ಪ, ಕರ್ನಲ್ ಚೆಪ್ಪುಡಿರ ಪಿ.ಮುತ್ತಣ್ಣ, ಕರ್ನಲ್ ಪಾಂಡಂಡ ಮುತ್ತಣ್ಣ, ಕರ್ನಲ್ ಕಂಡ್ರತಂಡ ಸುಬ್ಬಯ್ಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಕರ್ನಲ್ ಗೀತಾ ಮಹಾಬಲ ಶೆಟ್ಟಿ ಅವರು ಅಮರ ಜವಾನ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಮಾಜಿ ಸೈನಿಕರು, ಉಪ ತಹಶೀಲ್ದಾರರಾದ ಪೊನ್ನು, ಸ್ಟೇಟ್ ಬ್ಯಾಂಕ್ ಸಿಬ್ಬಂಧಿಗಳು, ತ್ರಿವೇಣಿ ಶಾಲೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ದೇಶದ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಚೇಂದ್ರಿಮಾಡ ಕೆ.ನಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಅರ್ಪಿಸುವ ಕಾರ್ಯಕ್ರಮ ನೆರವೇರಿತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: