ಪ್ರಮುಖ ಸುದ್ದಿ

ಸೆ.23 ರಂದು ಉಸ್ತುವಾರಿ ಸಚಿವ ವಿ.ಸೋಮಣ್ಣ ಕೊಡಗು ಭೇಟಿ

ರಾಜ್ಯ(ಮಡಿಕೇರಿ) ಸೆ.18 :- ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಸೆ.23 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ನಂತರ ಪ್ರಕೃತಿ ವಿಕೋಪದಿಂದಾದ ಹಾನಿ ಹಾಗೂ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದೆ.
ಮಧ್ಯಾಹ್ನ 12 ಗಂಟೆಗೆ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಸಂಬಂಧಪಟ್ಟಂತೆ ಪೂರ್ವ ಸಿದ್ಧತಾ ಸಭೆ, ಬಳಿಕ ಮಧ್ಯಾಹ್ನ 12.30 ಗಂಟೆಗೆ ಮಡಿಕೇರಿ ದಸರಾ ಜನೋತ್ಸವ ಸಂಬಂಧಪಟ್ಟಂತೆ ಪೂರ್ವ ಸಿದ್ಧತಾ ಸಭೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಮದೆ, ಕರ್ಣಂಗೇರಿ, ಜಂಬೂರು ಗ್ರಾಮಗಳಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ನಿರ್ಮಿಸಲಾಗುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: