ಮೈಸೂರು

ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಕಾಂ ವಿದ್ಯಾರ್ಥಿಗಳಿಗೆ ಅನುಗಮನ ಕಾರ್ಯಕ್ರಮ

ಮೈಸೂರು,ಸೆ.18:- ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಕಾಂ ವಿದ್ಯಾರ್ಥಿಗಳಿಗೆ ಅನುಗಮನ ಕಾರ್ಯಕ್ರಮವನ್ನು ಇಂದು ಏರ್ಪಡಿಸಲಾಗಿತ್ತು.
ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯ ಹಾಗೂ ಸದುಪಯೋಗದ ಬಗ್ಗೆ ಮಾಹಿತಿ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಎನ್.ನಾಗರಾಜ್, ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು, ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗ, ಮಾನಸಗಂಗೋತ್ರಿ, ಮೈಸೂರು ಇವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧ ಪ್ರಪಂಚದಲ್ಲಿ ಸ್ನಾತಕೋತ್ತರ ಪದವಿಯ ಜೊತೆಗೆ ನೈಪುಣ್ಯತೆ, ಸಾಮಾನ್ಯ ಜ್ಞಾನ ಮತ್ತು ಮೃದು ಕೌಶಲ್ಯ ಅತ್ಯವಶ್ಯಕವಾಗಿದ್ದು ಇವುಗಳನ್ನ ರೂಢಿಸಿಕೊಳ್ಳುವ ದಿಕ್ಕಿನಲ್ಲಿ ವಿದ್ಯಾರ್ಥಿಗಳು ಅವಿರತ ಪ್ರಯತ್ನಶೀಲರಾಗಬೇಕೆಂದು ತಿಳಿಸಿದರು.
ಪ್ರಾಂಶುಪಾಲರಾದ ಡಾ.ಎಂ.ಮಹದೇವಯ್ಯರವರು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನಿಟ್ಟುಕೊಂಡು ಆ ಗುರಿಯನ್ನು ಮುಟ್ಟಬೇಕಾದರೆ ಈಗಿನಿಂದಲೇ ಕಾರ್ಯನ್ಮುಖರಾಗಬೇಕು ಜೊತೆಗೆ ಗುರುಹಿರಿಯರ ಮಾರ್ಗದರ್ಶನ ಅಷ್ಟೇ ಮುಖ್ಯವಾದುದು, ಆದ್ದರಿಂದ ನಮ್ಮ ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.
ದರ್ಶಿನಿ.ಜೆ, ಸಹಾಯಕ ಪ್ರಾಧ್ಯಾಪಕರು ಕಾರ್ಯಕ್ರಮವನ್ನು ಸಂಯೋಜಿಸಿದರು. ಸ್ವಾತಿ ವಿಜಯ ವಿಠ್ಠಲ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಎಲ್ಲಾ ಅಧ್ಯಾಪಕರು, ಅಧ್ಯಾಪಕೇತರರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. (ಎಸ್.ಎಚ್)

Leave a Reply

comments

Related Articles

error: