ಮೈಸೂರು

ಹಾಡುಹಗಲೇ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ

ಮೈಸೂರು,ಸೆ.19:- ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ ಘಟನೆ ಜೆ.ಪಿ.ನಗರದಲ್ಲಿ ಹಾಡು ಹಗಲೇ ನಡೆದಿದೆ.

ಮಹದೇವಮ್ಮ(48)ಎಂಬವರೇ ಚಿನ್ನದ ಸರ ಕಳೆದುಕೊಂಡವರಾಗಿದ್ದಾರೆ. ಇವರು ಜೆ.ಪಿ.ನಗರದ ಬಾಲಗಂಗಾಧರ ನಾಥ ಸ್ವಾಮಿ ಉದ್ಯಾನದ ಹಿಂಭಾಗದ ರಸ್ತೆಯಲ್ಲಿ ನಿನ್ನೆ ಬೆಳಿಗ್ಗೆ 11ಗಂಟೆಯ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಅವರ ಕತ್ತಿನಲ್ಲಿದ್ದ 70ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ.

ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: