ಮೈಸೂರು

ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ

ಮೈಸೂರು ತಾಲೂಕಿನ ಹಲಗಯ್ಯನಹುಂಡಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದ ಉದ್ಘಾಟನಾ ಸಮಾರಂಭವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಚಾಮರಾಜನಗರ ಕ್ಷೇತ್ರದ ಸಂಸದ ದ್ರುವನಾರಾಯಣ ರಿಬ್ಬನ್  ಕತ್ತರಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ.ಧೃವಕುಮಾರ್ ಹಾಗೂ  ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ಮಗ ಡಾ.ಯತೀಂದ್ರ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ರಾಮಯ್ಯ, ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ಆರ್.ಕೆ.ರಾಜು, ಪ್ರಾಧಿಕಾರದ ಸಹಾಯಕ ಅಭಿಯಂತರರು, ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿ ವರ್ಗದವರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು, ಸ್ಥಳೀಯ ಪ್ರತಿನಿಧಿಗಳು ಭಾಗವಹಿಸಿದ್ದರು.

 

Leave a Reply

comments

Related Articles

error: