ಸುದ್ದಿ ಸಂಕ್ಷಿಪ್ತ

ಸೆ.24 ರಂದು ಮಾವುತರು, ಕಾವಾಡಿಗಳಿಗೆ ಉಚಿತ ಕೇಶಾಲಂಕಾರ

ಮೈಸೂರು,ಸೆ.19-ಸಿದ್ದಾರ್ಥನಗರ ಸವಿತಾ ಸಮಾಜ ವತಿಯಿಂದ ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಆವರಣದಲ್ಲಿ ಮಾವುತರು ಹಾಗೂ ಕಾವಾಡಿಗಳಿಗೆ ಉಚಿತ ಕೇಶಾಲಂಕಾರದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದಾರೆ. ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಯತೀಂದ್ರ ಸಿದ್ದರಾಮಯ್ಯ, ತನ್ವೀರ್ ಸೇಠ್, ಸಂಸದ ಪ್ರತಾಪಸಿಂಹ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ. (ಎಂ.ಎನ್)

 

Leave a Reply

comments

Related Articles

error: