ಪ್ರಮುಖ ಸುದ್ದಿ

ಮಡಿಕೇರಿ ದಸರಾ ಜನೋತ್ಸವ ಕಚೇರಿ ಆರಂಭ

ರಾಜ್ಯ(ಮಡಿಕೇರಿ) ಸೆ. 20 :-ನಗರದ ನಗರಸಭೆಯ ಸ್ಥಾಯಿ ಸಮಿತಿ ಕಚೇರಿಯಲ್ಲಿ ಮಡಿಕೇರಿ ಜನೋತ್ಸವ ದಸರಾ ಕಚೇರಿ ಆರಂಭಗೊಂಡಿದ್ದು, ವಿಶೇಷ ಪೂಜಾ ಕಾರ್ಯಕ್ರಮವು   ನಡೆಯಿತು.
ಶಾಸಕರಾದ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಡಿಕೇರಿ ಜನೋತ್ಸವ ದಸರಾ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಶುಭಕೋರಿದರು.
ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ರಾಬಿನ್ ದೇವಯ್ಯ, ಉಪಾಧ್ಯಕ್ಷರಾದ ನೆರವಂಡ ಜೀವನ್, ಪ್ರಧಾನ ಕಾರ್ಯದರ್ಶಿ ಜಗದೀಶ್, ಖಜಾಂಜಿ ಸುಬ್ರಮಣಿ, ಸಾಂಸ್ಕøತಿಕ ಸಮಿತಿ ಅಧ್ಯಕ್ಷರಾದ ಆರ್.ಬಿ.ರವಿ, ಕವಿಗೋಷ್ಠಿ ಅಧ್ಯಕ್ಷರಾದ ಚಿ.ನಾ.ಸೋಮೇಶ್, ಸಮಿತಿ ಸದಸ್ಯರು ಇತರರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪೂಜಾ ಕಾರ್ಯಕ್ರಮದ ನಂತರ ಮಾತನಾಡಿದ ಕಾರ್ಯಾಧ್ಯಕ್ಷರಾದ ರಾಬಿನ್ ದೇವಯ್ಯ ಅವರು ಮಡಿಕೇರಿ ಜನೋತ್ಸವ ದಸರಾವನ್ನು ಯಶಸ್ವಿಯಾಗಿ ನಡೆಸುವ ದಿಸೆಯಲ್ಲಿ ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದು ಅವರು ತಿಳಿಸಿದರು. ಅರ್ಚಕರಾದ ಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ಗಣಹೋಮ, ಪೂಜಾ ಕಾರ್ಯಕ್ರಮ ನಡೆಯಿತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: