ಪ್ರಮುಖ ಸುದ್ದಿ

ಜಿಲ್ಲಾ ಆರೋಗ್ಯಾಧಿಕಾರಿ ಕಛೇರಿ ಮೇಲೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ರಾಜ್ಯ(ದೊಡ್ಡಬಳ್ಳಾಪುರ)ಸೆ.20:- ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ   ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್‌ ಬಿದ್ದಿದ್ದಾರೆ.

ದೊಡ್ಡಬಳ್ಳಾಪುರ ದೇವನಹಳ್ಳಿ ರಸ್ತೆಯ ಚಪ್ಪರದ ಕಲ್ಲು ಬಳಿಯ ಜಿಲ್ಲಾಡಳಿತ ಭವನ ದಲ್ಲಿ  ಜಿಲ್ಲಾ ಆರೋಗ್ಯಾಧಿಕಾರಿ ಜೊತೆಗೆ ಎಫ್ ಡಿ ಎ, ಅಧಿಕಾರಿ ಗಂಗರಾಜು ಮತ್ತು ಡಿ ಗ್ರೂಪ್ ಸಿಬ್ಬಂದಿ ಗುರು ಪ್ರಸಾದ್ ಎಸಿಬಿ ಬಲೆಗೆ‌ ಬಿದ್ದಿದ್ದಾರೆ. ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡಲು  75 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಕಛೇರಿ ಯಲ್ಲಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಇನ್ಸಪೆಕ್ಟರ್ ಕುಮಾರಸ್ವಾಮಿ ನೇತೃತ್ವ ದಲ್ಲಿ ದಾಳಿ ನಡೆದಿದೆ. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: