ಮೈಸೂರು

ಮೈಸೂರು ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಉಚಿತ ಹೆಲ್ತ್ ಕಾರ್ಡ್ ವಿತರಣೆ

ಮೈಸೂರು,ಸೆ.20:- ಮೈಸೂರು ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆಯುಷ್ಮಾನ್ ಆರೋಗ್ಯ ಕ್ಷೇಮಾಭಿಯಾನ, ಹೆಲ್ತ್ ಕಾರ್ಡ್ ಉಚಿತ ವಿತರಣೆ ಕಾರ್ಯಕ್ರಮವನ್ನಿಂದು ಹಮ್ಮಿಕೊಳ್ಳಲಾಗಿತ್ತು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಶ್ರೀ ರಾಜಶೇಖರ ಕೋಟಿ ಸಭಾಂಗಣದಲ್ಲಿ  ಕರ್ನಾಟಕ ಸರ್ಕಾರ ಸಹಕಾರದೊಂದಿಗೆ   ಆಯುಷ್ಮಾನ್ ಯೋಜನೆಗೆ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಚಾಲನೆ ನೀಡಿದರು. ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರು ಸರತಿ ಸಾಲಿನಲ್ಲಿ ನಿಂತು ಆಯುಷ್ಮಾನ್ ಯೋಜನೆಯ ಕಾರ್ಡ್ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಿ.ಕೆ.ಮಹೇಂದ್ರ,ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು,ಸಂಘದ ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: