ಮೈಸೂರು

ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಪ್ರತಿಭಾ ಪುರಸ್ಕಾರ

ಮೈಸೂರಿನ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದಿಂದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಫೆ.26ರ, ಬೆಳಿಗ್ಗೆ 10ಕ್ಕೆ ನಿತ್ಯೋತ್ಸವ ಮಲ್ಟಿಪರ್ಪಸ್ ಕನ್ವೆನ್ಶನ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಎನ್.ಸುಬ್ರಮಣ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚೆನ್ನಣ್ಣವರ್, ಸಹಾಯಕ ಕಾರ್ಮಿಕ ಆಯುಕ್ತ ಮೀನಾ ಪಾಟೀಲ್ ಹಾಗೂ ಬಿಗ್ ಬಾಸ್ ವಿಜೇತ ಪ್ರಥಮ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಂಕೇತಿಕವಾಗಿ ಗುರುತಿನ ಚೀಟಿಗಳನ್ನು ವಿತರಿಸುವರು ಎಂದರು.

ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣೆ ಸೇರಿದಂತೆ ಬಡಗಿ ಕಾರ್ಮಿಕರಿಗೆ ಕೌಶಲ ತರಬೇತಿ, ನೀರು ಮತ್ತು ಒಳಚರಂಡಿ ಕಾರ್ಮಿಕರಿಗೆ ‘ಹೆಲ್ತ್ ಆನ್ ವಿಲ್ಸ್’ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಸರ್ಕಾರದ ಕರಡಿನಂತೆ ನೋಂದಣಿಯಾಗಿದ್ದಾರೆ. ಸುಮಾರು 500 ಕಾರ್ಮಿಕರು ಗುರುತಿನ ಚೀಟಿ ಪಡೆಯಲು ಅರ್ಹರಾಗಿದ್ದಾರೆ ಎಂದರು.

ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಮಿತಿ ಗೌರವ ಕಾರ್ಯದರ್ಶಿ ದಿನೇಶ್.ಬಿ.ಎಸ್, ಸದಸ್ಯರಾದ ರಮೇಶ್ ರಾವ್, ವಿ.ಮೋಹನ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

comments

Related Articles

error: