ದೇಶಪ್ರಮುಖ ಸುದ್ದಿ

ಸೆ.25ಕ್ಕೆ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಪ್ರಕಟ  

ನವದೆಹಲಿ,ಸೆ.21-ಕೇಂದ್ರದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ವಿಶೇಷ ನ್ಯಾಯಾಲಯ ಸೆ.25ಕ್ಕೆ ಕಾಯ್ದಿರಿಸಿದೆ.

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಜಯ್‌ ಕುಮಾರ್‌ ಕುಹರ್‌ ಸೆ.25ಕ್ಕೆ ಮಧ್ಯಾಹ್ನ 3.3.ಕ್ಕೆ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಿದರು.

ಮೂರು ದಿನಗಳ ಕಾಲ ನಡೆದ ವಾದ-ಪ್ರತಿವಾದ ಅಂತ್ಯಗೊಂಡ ನಂತರ ನ್ಯಾಯಾಧೀಶರು ಆದೇಶ ನೀಡಿದರು. ಭೋಜನ ವಿರಾಮದ ನಂತರ ತೀರ್ಪು ಪ್ರಕಟಣೆಯ ದಿನಾಂಕ ಪ್ರಕಟಿಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು. ಅದರಂತೆ ಭೋಜನ ವಿರಾಮದ ನಂತರ ಈ ಆದೇಶ ನೀಡಿದರು.

ಡಿ.ಕೆ.ಶಿವಕುಮಾರ್ ಅವರ ಜಾರಿ ನಿರ್ದೇಶನಾಲಯ ಕಸ್ಟಡಿ ಅವಧಿ ಮುಗಿದ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಕಳೆದ ಮಂಗಳವಾರ ಡಿಕೆಶಿ 14 ದಿನಗಳ ಕಾಲ (ಅಕ್ಟೋಬರ್‌ 1ರವರೆಗೆ) ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು.

ಡಿ.ಕೆ.ಶಿವಕುಮಾರ್‌ ಅವರ ನಿವಾಸ, ಕಚೇರಿಗಳ ಮೇಲೆ ಆಗಸ್ಟ್‌ 1, 2017ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಡಿಕೆಶಿಗೆ ಸೇರಿದ್ದ ಒಟ್ಟು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ನವದೆಹಲಿಯ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 8.9 ಕೋಟಿ ರೂ. ನಗದು ಪತ್ತೆಯಾಗಿತ್ತು. (ಎಂ.ಎನ್)

Leave a Reply

comments

Related Articles

error: