ಮೈಸೂರು

ದಸರಾ ಪ್ರಯುಕ್ತ ಅಕ್ಟೋಬರ್ 3 ರಿಂದ 17 ರವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಅಭಿರಾಮ್ ಜಿ.ಶಂಕರ್

ಮೈಸೂರು,ಸೆ.22:- ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಮೈಸೂರು ನಗರದಲ್ಲಂತೂ ದಸರಾ ತಯಾರಿ ಭರದಿಂದ ಸಾಗುತ್ತಿದೆ.   ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ದಸರಾಗೆ ರಜೆ ಘೋಷಣೆ ಮಾಡಿದ್ದಾರೆ.

ಅಕ್ಟೋಬರ್ 3 ರಿಂದ 17 ರವರೆಗೆ ದಸರಾ ರಜೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಅಕ್ಟೋಬರ್​ 18ರಂದು ಶಾಲೆಗಳು ಪುನಾರಂಭವಾಗಲಿವೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: