ಪ್ರಮುಖ ಸುದ್ದಿಮೈಸೂರು

ಸುತ್ತೂರು ಶಾಖಾ ಮಠಕ್ಕೆ ಇಂದು  ಸಾಹಿತಿ ಎಸ್.ಎಲ್.ಭೈರಪ್ಪ ಭೇಟಿ

ಮೈಸೂರು,ಸೆ.22:- ಸುತ್ತೂರು ಶಾಖಾ ಮಠಕ್ಕೆ ಇಂದು  ಸಾಹಿತಿ ಎಸ್.ಎಲ್.ಭೈರಪ್ಪ ಭೇಟಿ ನೀಡಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶೀಕೆಂದ್ರ ಸ್ವಾಮೀಜಿಗಳೊಂದಿಗೆ ಉಭಯಕುಶಲೋಪರಿ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ  ಭೈರಪ್ಪನವರು ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ ಎಂದರು. ಅಮೇರಿಕಾದಲ್ಲಿ ‘ಹೌಡಿ ಮೋದಿ’ ಕಾರ್ಯಕ್ರಮ ವಿಚಾರಕ್ಕೆ ಪ್ರತಿಕ್ರಿಯಿಸಿ ಮೋದಿ ಅವರಿಗೆ ಅಪಾರ ಲೋಕ ಜ್ಞಾನ ಇದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೇಳಿಕೊಡಲು ಮೋದಿ ಅವರೊಂದಿಗೆ ಒಳ್ಳೆಯ ಟೀಮ್ ಇದೆ. ಮೋದಿ ಏನೂ ಮಾಡಿದರೂ ಸರಿಯಾಗಿಯೇ ಇರುತ್ತೆ. ಭಾರತ- ಅಮೆರಿಕಾ ನಡುವಿನ ವ್ಯಾಪಾರ ಸಂಬಂಧ ದೊಡ್ಡಮಟ್ಟದ್ದು. ಅದನ್ನು ಸರಿಯಾಗಿ ನಡೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.

ರಾಮಮಂದಿರ ವಿವಾದ ವಿಚಾರಣೆಗೆ ಗಡುವು ನಿಗದಿ ವಿಚಾರಕ್ಕೆ ಪ್ರತಿಕ್ರಿಯಿಸಿ ಭಾರತದಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು. ರಾಮಮಂದಿರ ನಿರ್ಮಾಣವಾಗಲಿ ಎಂದು ಬಯಸುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: