ಸುದ್ದಿ ಸಂಕ್ಷಿಪ್ತ

ನಾಯಕ ಸಮಾಜದ ಪ್ರತಿಭಾ ಪುರಸ್ಕಾರ

ಮೈಸೂರು,ಸೆ.24 : ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಹಾಗು ಡಿಪ್ಲೊಮಾ ಕೋರ್ಸ್ ನಲ್ಲಿ ಅತಿ ಹೆಚ್ಚು ಅಂಕಗಳಿಸಿದ ನಾಯಕ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ.

ವಿಜಯನಗರದ ಎರಡನೇ ಹಂತದ ವಾಲ್ಮೀಕಿ ಭವನದಲ್ಲಿ ಸೆ.25ರಂದು  ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಲಿದ್ದು, ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಜಿ.ಪಂ. ಸದಸ್ಯರು ಭಾಗಿಯಾಗುವರು.

ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ಮತ್ತು ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ದೇವರಾಜ್ ಟಿ.ಕಾಟೂರು ತಿಳಿಸಿದ್ದಾರೆ  (ಕೆ.ಎಂ.ಆರ್)

Leave a Reply

comments

Related Articles

Check Also

Close
error: