ಪ್ರಮುಖ ಸುದ್ದಿಮನರಂಜನೆ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ದೇಶ(ನವದೆಹಲಿ)ಸೆ.25:-  ಬಾಲಿವುಡ್ ಹಿರಿಯ ನಟ, ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿದೆ. ಈ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಅಧಿಕೃತವಾಗಿ ಘೋಷಣೆ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಜಾವಡೇಕರ್, ಎರಡು ತಲೆಮಾರಿನ ಜನತೆಗೆ ಮನರಂಜನೆ ನೀಡಿ, ಎಲ್ಲರಿಗೂ ಸ್ಫೂರ್ತಿ ಆಗಿರುವ ದಂತಕಥೆಯಾದ ಅಮಿತಾಬ್ ಬಚ್ಚನ್ ಅವರನ್ನು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಇದಕ್ಕೆ ದೇಶ ಮತ್ತು ಅಂತರರಾಷ್ಟ್ರೀಯ ಸಮುದಾಯ ಹರ್ಷ ವ್ಯಕ್ತಪಡಿಸಿದೆ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ಹೇಳಿದ್ದಾರೆ.

1969 ರಲ್ಲಿ ಭಾರತೀಯ ಚಲನಚಿತ್ರದ ಪಿತಾಮಹ ಎಂದೇ ಕರೆಯಲ್ಪಡುವ ಪ್ರಸಿದ್ಧ ಚಲನಚಿತ್ರ ನಿರ್ಮಾಪಕ-ನಿರ್ದೇಶಕ ದಾದಾಸಾಹೇಬ್ ಫಾಲ್ಕೆ ಅವರಿಗೆ ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. (ಎಸ್.ಎಚ್)

Leave a Reply

comments

Related Articles

error: