ಮೈಸೂರು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿದು ರೈತ ಮಹಿಳೆ ಸಾವು

ಮೈಸೂರು,ಸೆ.25:- ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವೊಂದು ಕಡಿದ ಪರಿಣಾಮ ರೈತ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಬಿಳಿಕೆರೆ ಹೋಬಳಿಯ ಮಲ್ಲೇಗೌಡನ ಕೊಪ್ಪಲಿನ ನಿವಾಸಿ ದಿವಂಗತ ರಮೇಶ್ ಅವರ ಪತ್ನಿ ಪ್ರಮೀಳಾ(40)ಎಂದು ಗುರುತಿಸಲಾಗಿದೆ. ಅವರು ತಮ್ಮ ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಾವು ಕಡಿತದಿಂದ ಅಸ್ವಸ್ಥರಾದ ಅವರನ್ನು ತಕ್ಷಣಕ್ಕೆ ಹುಣಸೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತಾದರೂ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: