ಮೈಸೂರು

 ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ

ಮೈಸೂರು,ಸೆ.25:- ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆಯ ‘ಸುವರ್ಣ ಮಹೋತ್ಸವ’ದ ಅಂಗವಾಗಿ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ನಿನ್ನೆ  ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಕಾಲೇಜಿನ ಪಕ್ಕದಲ್ಲಿರುವ ಉದ್ಯಾನವನವನ್ನು ಸ್ವಚ್ಛಗೊಳಿಸಿ ಗಿಡಗಳಿಗೆ ಪಾತಿ ಮಾಡುವ ಮೂಲಕ ಸ್ವಯಂ ಸೇವಕ ಮತ್ತು ಸ್ವಯಂ ಸೇವಕಿಯರು ಅರ್ಥಪೂರ್ಣವಾಗಿ ಎನ್.ಎಸ್.ಎಸ್. ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿದರು.

ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ವೆಂಕಟರಾಮು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಶೈಕ್ಷಣಿಕ ಸಲಹೆಗಾರರಾದ ಡಾ. ಎಸ್. ಆರ್. ರಮೇಶ್, ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿಗಳಾದ ಡಾ. ಧರ್ಮೇಶ ಎ.ಜಿ., ಮತ್ತು ರಾ.ಸೇ.ಯೋ. ಸ್ವಯಂಸೇವಕರು ಹಾಗೂ ಸ್ವಯಂ ಸೇವಕಿಯರು  ಪಾಲ್ಗೊಂಡಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: