ಕರ್ನಾಟಕ

ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಮಂಡ್ಯ (ಸೆ.25): 2019-20ನೇ ಸಾಲಿನ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಆಡಳಿತ ನ್ಯಾಯಾಧೀಕರಣದಲ್ಲಿ 2 ವರ್ಷಗಳ ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

40 ವರ್ಷದೊಳಗಿನ ಹಾಗೂ ವಾರ್ಷಿಕ ರೂ.2.50ಲಕ್ಷ ಆದಾಯದ ಮಿತಿಯಿರುವ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದ್ದು, ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಿ ಸಂಬಂಧಿಸಿದ ತಾಲ್ಲೂಕುಗಳಲ್ಲಿರುವ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಅರ್ಜಿಯ ಜೊತೆಗೆ ಅಗತ್ಯ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಂಡ್ಯ ಹಾಗೂ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆರವರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. (ಎನ್.ಬಿ)

Leave a Reply

comments

Related Articles

error: