ಪ್ರಮುಖ ಸುದ್ದಿ

ಮಂಡ್ಯ ಕೆ.ಆರ್.ಪೇಟೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆಯೇ ಬಿ.ವೈ ವಿಜಯೇಂದ್ರ?

ರಾಜ್ಯ(ಮಂಡ್ಯ)ಸೆ.25:- ರಾಜ್ಯದಲ್ಲಿನ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ನಾಲ್ಕೈದು ದಿನವಷ್ಟೇ ಬಾಕಿ ಇದ್ದು, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ‘ಕಮಲ’ ಅರಳಿಸಲು ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಿಎಂ ಬಿ.ಎಸ್. ಯಡಿಯೂರಪ್ಪ ತವರು ಜಿಲ್ಲೆ ಬೂಕನಕೆರೆ ಕೆ.ಆರ್. ಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಡಲಿದ್ದು, ಕೆ.ಆರ್.ಪೇಟೆ ಅನರ್ಹ ಶಾಸಕ ನಾರಾಯಣಗೌಡ ಅನರ್ಹತೆ ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಲಿದೆ, ಒಂದೊಮ್ಮೆ ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದಿದ್ದರೆ, ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಕ್ಷ(ಬಿಜೆಪಿ) ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಇಲ್ಲಿ ಶಾಸಕ ನಾರಾಯಣ ಗೌಡ ಚುನಾವಣಾ ಕಣಕ್ಕಿಳಿಯಲಾಗಿದ್ದರೆ ಬಿ.ವೈ ವಿಜಯೇಂದ್ರರನ್ನೇ ನಿಲ್ಲಿಸಿ ಎಂದು ಕಾರ್ಯಕರ್ತರು ಹೇಳಿದ್ದಾರೆ ಎನ್ನಲಾಗುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: