ಪ್ರಮುಖ ಸುದ್ದಿ

ಮಡಿಕೇರಿ ದಸರಾ ಕ್ರೀಡಾಕೂಟ : ಸೆ.28 ರಂದು ಶಟಲ್ ಬ್ಯಾಡ್ಮಿಂಟನ್ ಮತ್ತು ವುಶು ಕ್ರೀಡೆಯ ಆಕರ್ಷಣೆ

ರಾಜ್ಯ( ಮಡಿಕೇರಿ) ಸೆ. 26 : -ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ನಗರ ದಸರಾ ಸಮಿತಿ ಮತ್ತು ದಸರಾ ಕ್ರೀಡಾ ಸಮಿತಿ ವತಿಯಿಂದ ಆಯೋಜಿಸಲಾಗಿರುವ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮತ್ತು ವುಶು ಕ್ರೀಡಾಕೂಟ ಸೆ.28 ರಂದು ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಪಿಲ್ ದುಗ್ಗಳ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಾವಳಿಗೆ ಮಡಿಕೇರಿ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಚಾಲನೆ ನೀಡಲಿದ್ದಾರೆ ಎಂದರು.
ನಗರಸಭಾ ಮಾಜಿ ಅಧ್ಯಕ್ಷ ಪಿ.ಡಿ.ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ನಗರ ದಸರಾ ಸಮಿತಿಯ ಉಪಾಧ್ಯಕ್ಷ ನೆರವಂಡ ಜೀವನ್ ಹಾಗೂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪಿ.ಟಿ.ಉಣ್ಣಿಕೃಷ್ಣ ಪಾಲ್ಗೊಳ್ಳಲಿದ್ದಾರೆ.
ಅಂದು ಸಂಜೆ 5.30ಕ್ಕೆ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನಗರ ದಸರಾ ಸಮಿತಿಯ ಉಪಾಧ್ಯಕ್ಷರುಗಳಾದ ಬಿ.ಎಂ.ರಾಕೇಶ್, ಅನಿತಾ ಪೂವಯ್ಯ, ಗೌರವ ಅಧ್ಯಕ್ಷರುಗಳಾದ ಜಿ.ಎಂ.ಸತೀಶ್ ಪೈ, ಸವಿತಾ ರೈ, ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಆರ್.ಬಿ.ರವಿ ಹಾಗೂ ವರ್ತಕ ಡಿ.ಪಿ.ನಾಗೇಶ್ ಪಾಲ್ಗೊಳ್ಳಲಿದ್ದಾರೆ.
ಅ.5 ರಂದು ಬೆಳಗ್ಗೆ 10.30 ಗಂಟೆಗೆ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ದಸರಾ ಸಮಿತಿಯ ಉಪಾಧ್ಯಕ್ಷ ಬಿ.ಕೆ.ಅರಣ್ ಕುಮಾರ್ ಪಂದ್ಯ ಉದ್ಘಾಟಿಸಲಿದ್ದಾರೆ.
ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಆಸಿಫ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಸರಾ ಸಮಿತಿಯ ಉಪಾಧ್ಯಕ್ಷ ಪ್ರಭು ರೈ, ನಗರಸಭೆಯ ಮಾಜಿ ಸದಸ್ಯ ಆಶ್ರಫ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮನ್ಸೂರ್, ಅಲಂಕಾರ ಸಮಿತಿ ಅಧ್ಯಕ್ಷ ಸಿ.ಕೆ.ನಂದೀಶ್ ಪಾಲ್ಗೊಳ್ಳಲಿದ್ದಾರೆ.
ಅ.6 ರಂದು ಸಂಜೆ 5.30ಕ್ಕೆ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕ್ರೀಡಾ ಸಮಿತಿ ಅಧ್ಯಕ್ಷ ಬಿ.ಎಂ.ಹರೀಶ್, ಉಪಾಧ್ಯಕ್ಷ ಕುಯ್ಯಮುಡಿ ರಾಜೇಶ್, ಪ್ರಧಾನ ಕಾರ್ಯದರ್ಶಿ ಕಪಿಲ್ ದುಗ್ಗಳ, ಕಾರ್ಯದರ್ಶಿ ಎಂ.ಎ.ಮುನೀರ್ ಮಾಚಾರ್ ಹಾಗೂ ಸಾಂಸ್ಕೃತಿಕ ಸಮಿತಿ ಸದಸ್ಯ ತೆನ್ನೀರಮೈನಾ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸೆ.28 ರಂದು ವುಶು ಆಕರ್ಷಣೆ
ರಾಜ್ಯ ವುಶು ತರಬೇತುದಾರ ಎನ್.ಸಿ.ಸುದರ್ಶನ್ ಮಾತನಾಡಿ, ಸೆ.28 ರಂದು ಬೆಳಗ್ಗೆ 10 ಗಂಟೆಗೆ ನಗರದ ಪೊಲೀಸ್ ಸಮುದಾಯ ಭವನ (ಮೈತ್ರಿ ಹಾಲ್)ನಲ್ಲಿ ವುಶು ಕ್ರೀಡಾಕೂಟ ನಡೆಯಲಿದ್ದು, ದಸರಾ ಸಮಿತಿ ಕಾರ್ಯಧ್ಯಕ್ಷ ರಾಬಿನ್ ದೇವಯ್ಯ ಚಾಲನೆ ನೀಡಲಿದ್ದಾರೆ ಎಂದರು.
ಜಿಲ್ಲಾ ವುಶು ಸಂಸ್ಥೆಯ ಅಧ್ಯಕ್ಷ ಪಿ.ಕೆ.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕ್ರೀಡಾ ಕೂಟಕ್ಕೆ ಮುಖ್ಯ ಅತಿಥಿಗಳಾಗಿ ಯೋಜನಾ ಸೇವಾ ಕ್ರೀಡಾ ಇಲಾಖೆಯ ನಿರ್ದೇಶಕರಾದ ಜಯಲಕ್ಷ್ಮಿಬಾಯಿ ಭಾಗವಹಿಸಲಿದ್ದಾರೆ.
ಅಂದು ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಎಸ್.ರಮೇಶ್, ಮಾಜಿ ಸದಸ್ಯರಾದ ಸಂಗೀತ ಪ್ರಸನ್ನ, ಪ್ರಕಾಶ್ ಆಚಾರ್ಯ ಭಾಗವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಬೈಶ್ರೀ ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದಸರಾ ಸಮಿತಿಯ ಉಪಾಧ್ಯಕ್ಷರಾದ ಪ್ರಭು ರೈ, ರಾಜೇಶ್ ಕುಯ್ಯಮುಡಿ ಹಾಗೂ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಬಿ.ಎಂ.ಹರೀಶ್ ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: