ಪ್ರಮುಖ ಸುದ್ದಿ

ಮಡಿಕೇರಿ ದಸರಾಗೆ 1 ಕೋಟಿ ರೂ. ಬಿಡುಗಡೆ

ರಾಜ್ಯ( ಮಡಿಕೇರಿ) ಸೆ.26 :-ಮಡಿಕೇರಿ ದಸರಾ ಉತ್ಸವಕ್ಕೆ ಸರ್ಕಾರ ಒಂದು ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಜಿಲ್ಲಾಧಿಕಾರಿಯವರಿಗೆ ಒಂದು ಕೋಟಿ ರೂ. ಬಿಡುಗಡೆ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.
ಮಡಿಕೇರಿ ದಸರಾ ಉತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲು ಒಂದು ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರಾದ ರಾಬಿನ್ ದೇವಯ್ಯ ಅವರು ಕೋರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿ ಹಾಗೂ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ ಅವರ ಸಹಕಾರ ಮತ್ತು ಪ್ರಯತ್ನದಿಂದ ಮಡಿಕೇರಿ ದಸರಾಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ರಾಬಿನ್ ದೇವಯ್ಯ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: