ಮೈಸೂರು

ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ  ಕಾಂಗ್ರೆಸ್ ನಾಯಕರು  ಕಾಂಗ್ರೆಸ್ ಹೈ ಕಮಾಂಡ್ ಗೆ ಕಪ್ಪ  ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ನಿವಾಸದ  ಎದುರು ಬಿಜೆಪಿ ಗ್ರಾಮಾಂತರ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯದ ಕಾಂಗ್ರೆಸ್ ನಾಯಕರು ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಗ್ರಾಮಾಂತರ ಯುವ ಮೋರ್ಚಾ ಕಾರ್ಯಕರ್ತರು  ಮೈಸೂರಿನ ವಿಜಯನಗರದಲ್ಲಿರುವ ಡಾ.ಹೆಚ್.ಸಿ.ಮಹದೇವಪ್ಪ ಅವರ ನಿವಾಸದ  ಎದುರು ಪ್ರತಿಭಟನೆ ನಡೆಸಿದರಲ್ಲದೇ ಮಹದೇವಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಸಚಿವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ತಮ್ಮ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಮುಖ್ಯಮಂತ್ರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸರ್ಕಾರವನ್ನು ವಿಸರ್ಜಿಸಬೇಕು ಎಂದು ಒತ್ತಾಯಿಸಿದರು.

Leave a Reply

comments

Related Articles

error: