ಪ್ರಮುಖ ಸುದ್ದಿ

ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲು ಸೆ.27ರಂದು ಜಾಗೃತಿ

ರಾಜ್ಯ( ಮಡಿಕೇರಿ) ಸೆ. 27 :- ಗ್ರೀನ್ ಸಿಟಿ ಫೋರಂ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸುವ ಸಲುವಾಗಿ ಹಾಗೂ ವಿಶ್ವ ಪ್ರವಾಸೋದ್ಯಮದ ಅಂಗವಾಗಿ ಸೆ. 27 ರಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.
ಸೆ. 27 ರಂದು ಬೆಳಗ್ಗೆ 7 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಸುಮಾರು 200 ಜನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಒಳಗೊಂಡ ತಂಡವು ಮ್ಯಾರಥಾನ್, ಸೈಕಲ್, ಬೈಕ್‍ರ್ಯಾಲಿ ನಡೆಯಲಿದೆ.
ಬೆಳಗ್ಗೆ 8.30ಕ್ಕೆ ಕೋಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ.
ಜಾಥಕ್ಕೆ ಕೊಡಗು ಜಿಲ್ಲಾಧಿಕಾರಿಗಳು ಚಾಲನೆ ನೀಡಿ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದರೆ. ಅವರಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜೊತೆಯಾಗಲಿದ್ದಾರೆ.
ಇದು ಕೊಡಗಿನಲ್ಲಿ ಅತ್ಯಂತ ಕಳವಳಕಾರಿಯಾಗಿ ಇರುವ ಪ್ಲಾಸ್ಟಿಕ್ ನಿಷೇಧ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಗ್ರೀನ್ ಸಿಟಿ ಫೋರಂನ ಅಧ್ಯಕ್ಷರಾದ ಕುಕ್ಕೆರ ಜಯಾ ಚಿಣ್ಣಪ್ಪ ಹಾಗೂ ಸ್ಥಾಪಕ ಅಧ್ಯಕ್ಷ ಚೆಯ್ಯಂಡ ಸತ್ಯ ವಿನಂತಿಸಿಕೊಂಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: