ಪ್ರಮುಖ ಸುದ್ದಿ

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

ರಾಜ್ಯ(ಮಡಿಕೇರಿ) ಸೆ.27 :- ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು.
ಜಂತುಹುಳು ಬಾಧಿತ ಮಕ್ಕಳು ರಕ್ತಹೀನತೆ ಮತ್ತು ಅಪೌಷ್ಟಿಕತೆಯಿಂದಾಗಿ ಸುಸ್ತು ಹಾಗೂ ನಿಶ್ಯಕ್ತಿಯಿಂದ ಬಳಲುತ್ತಾರೆ. ಆದ್ದರಿಂದ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವಂತಾಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮನವಿ ಮಾಡಿದರು.
ಜಂತುಹುಳು ಬಾಧಿತ ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ತುಂಬಾ ಕುಂಠಿತವಾಗಿರುತ್ತದೆ. ಆದ್ದರಿಂದ ಜಂತುಹುಳು ನಿವಾರಣಾ ಮಾತ್ರೆಯನ್ನು ಮಕ್ಕಳಿಗೆ ನೀಡುವಂತಾಗಬೇಕು ಎಂದು ಅವರು ಕೋರಿದರು.
ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾತನಾಡಿ ಜಂತುಹುಳುಗಳು ಮಕ್ಕಳ ಬೆಳವಣಿಗೆ ಕುಂಠಿತಗೊಳಿಸುತ್ತದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡುತ್ತದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ತಪ್ಪದೇ ಜಂತುಹುಳು ನಿವಾರಣೆ ಮಾತ್ರೆ ಸೇವಿಸಬೇಕೆಂದು ತಿಳಿಸಿದರು.
ಜಂತುಹುಳು ಭಾದೆಯಿಂದ ಮಕ್ಕಳ ದೈಹಿಕ ಮತ್ತು ಭೌದ್ದಿಕ ಬೆಳವಣಿಗೆ ಕುಂಠಿತವಾಗುತ್ತದೆ. ಇದನ್ನು ನಿವಾರಿಸಲು ಎಲ್ಲಾ ಮಕ್ಕಳು ತಪ್ಪದೆ ಜಂತುಹುಳು ಮಾತ್ರೆ ಪಡೆಯುವಂತಾಗಬೇಕು ಎಂದು ತಿಳಿಸಿದರು.
ಜಂತುಹುಳು ಮಕ್ಕಳಲ್ಲಿ ರಕ್ತಹೀನತೆ ಉಂಟುಮಾಡುತ್ತದೆ. ಹಾಗೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತದೆ. ಇದರ ನಿವಾರಣೆಗೆ ಜಂತುಹುಳು ನಿವಾರಕ ಮಾತ್ರೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ರಕ್ತಹೀನತೆ ತಡೆಗಟ್ಟುತ್ತದೆ. ವಿದ್ಯಾರ್ಥಿಗಳು ಹೆಚ್ಚು ಶುಚಿತ್ವಕ್ಕೆ ಆದ್ಯತೆ ನೀಡಿ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳುವಂತಾಗಬೇಕು ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಕುಮಾರ್ ಅವರು ಮಾತನಾಡಿ ಆರೋಗ್ಯವಂತ ಪ್ರಜೆಗಳಿಂದ ದೇಶದ ಅಭಿವೃದ್ಧಿ ಸಾಧ್ಯ. ದೇಶದ ಅಭಿವೃದ್ಧಿಗೆ ಆರೋಗ್ಯ ಸೂಚ್ಯಾಂಕವು ಅತ್ಯವಶ್ಯಕ ಎಂಬುದನ್ನು ಎಲ್ಲರೂ ಮನಗಂಡು ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ ತಪ್ಪದೇ ಎಲ್ಲಾ ವಿದ್ಯಾರ್ಥಿಗಳು ಜಂತುಹುಳು ನಿವಾರಣಾ ಮಾತ್ರೆ ಸೇವಿಸಬೇಕೆಂದು ಎಂದು ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ವೈದ್ಯಕೀಯ ಅಧೀಕ್ಷಕರಾದ ಡಾ.ಎ.ಜೆ.ಲೋಕೇಶ್, ಡಾ.ಎಂ.ಶಿವಕುಮಾರ್ ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: