
ಮೈಸೂರು
ಅ.1ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆ
ಮೈಸೂರು : ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅ.1ರ ಮಧ್ಯಾಹ್ನ3ಕ್ಕೆ ಡಾ.ಶಿವರಾತ್ರಿ ರಾಜೇಂದ್ರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಉದ್ಘಾಟಿಸುವರು, ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ. ಮೇಯರ್ ಪುಷ್ಪಲತಾ ಜಗನ್ನಾಥ್, ಜಿ.ಪಂ. ಅಧ್ಯಕ್ಷೆ ಪರಿಮಳ ಶ್ಯಾಮ್, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ ಪ್ರಸಾದ್, ಸುಮಲತಾ ಅಂಬರೀಶ್ ಇನ್ನಿತರ ಜನಪ್ರತಿನಿಧಿಗಳು ಹಾಜರಿರಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)