ಪ್ರಮುಖ ಸುದ್ದಿಮೈಸೂರು

ಕನ್ನಡ ಚಿತ್ರ ರಂಗದ ಕಲಾವಿದರನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಬೇಕು : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟನೆ

ಮೈಸೂರು,ಸೆ.29:-  ನಾಡಹಬ್ಬ ದಸರಾ ಮಹೋತ್ಸವದಲ್ಲಿ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸಲಾಗುತ್ತದೆ. ಅದರ ಜೊತೆಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಚಿತ್ರ ರಂಗದ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ   ತಿಳಿಸಿದರು.

ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಹಳ ಸಂತೋಷದಿಂದ ಕಾರ್ಯಕ್ರಮ ಉದ್ಘಾಟಿಸಿದ್ದೇನೆ. ನಾಲ್ಕುನೂರು ವರ್ಷದ ಇತಿಹಾಸ ಇರುವ ದಸರಾ ಮಹೋತ್ಸವದಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಕಲೆ ಸಾಹಿತ್ಯ ಹಾಗೂ ಸಂಸ್ಕೃತಿ ಕಲಾವಿದರನ್ನು ಬೆಳೆಸಲು ನೆರವಾಗುತ್ತದೆ ಎಂದು ಅವರು ತಿಳಿಸಿದರು.

ರಾಜ ಮಹಾರಾಜರ ಕಾಲದಲ್ಲಿ ವಿವಿಧ ಬಗೆಯ ಕಲಾವಿದರಿಗೆ ಅವರ ಆಸ್ಥಾನದಲ್ಲಿ ಅವಕಾಶ ಕಲ್ಪಿಸಿ ಕೊಡಲಾಗುತ್ತಿತ್ತು,ಆದರೆ ಪ್ರಜಾಪ್ರಭುತ್ವ ಕಾಲದಲ್ಲಿ ಸರ್ಕಾರವು ಕಲಾವಿದರನ್ನು ಪ್ರೋತ್ಸಾಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ನಾಗೇಂದ್ರ, ವಿಧಾನ ಪರಿಷತ್ ಸದಸ್ಯರುಗಳಾದ ಸಂದೇಶ್, ನಾಗರಾಜ್,ಕೆ.ಟಿ.ಶ್ರೀಕಂಠೆಗೌಡ, ಮಾಜಿ ಸಚಿವ ಶಿವಣ್ಣ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ನಟ ಜಗ್ಗೇಶ್, ನಿರ್ದೇಶಕ ನಾಗಣ್ಣ,  ನಟಿ ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್,ನಟಿಯರಾದ ಆಶಿಕಾ ರಂಗನಾಥ್, ಸಂಚಿತಾ ಪಡುಕೋಣೆ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: