ಪ್ರಮುಖ ಸುದ್ದಿಮೈಸೂರು

ಸಾಹಸ ಕ್ರೀಡೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ಸೆ.29:- ಯುವಜನರಲ್ಲಿ ಸಾಹಸ ಪ್ರವೃತ್ತಿಯನ್ನು ಬೆಳೆಸುವಲ್ಲಿ ಸಾಹಸ ಕ್ರೀಡೆಗಳು ಪ್ರಧಾನ ಪಾತ್ರ ವಹಿಸುತ್ತವೆ ಎಂದು ಶಾಸಕ ಜಿ.ಟಿ. ದೇವೇಗೌಡ ಇಂದು ತಿಳಿಸಿದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿ ಸಹಯೋಗದೊಂದಿಗೆ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಳೇ ಉಂಡವಾಡಿ ಬಳಿಯ ಕೆಆರ್ ಎಸ್ ಹಿನ್ನೀರಿನಲ್ಲಿ ಆಯೋಜಿಸಿದ್ದ ದಸರಾ ಸಾಹಸೋತ್ಸವವನ್ನು ಸ್ವತಃ ಯಾತ್ರೀಕೃತ ಬೋಟ್ ನಲ್ಲಿ ವಿಹರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಜಲ ಸಾಹಸ ಕ್ರೀಡೆಗಳಿಂದ ಯುವಜನರಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ, ಸಾಹಸೀ ಕ್ರೀಡೆಗಳನ್ನು ಆಯೋಜಿಸುವಂತೆ ಸಂಘಟಕರಿಗೆ ಕಿವಿಮಾತು ಹೇಳಿದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಜಿ. ಕಲ್ಪನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಿಕ ಸುರೇಶ್, ದಸರಾ ಸಾಹಸೋತ್ಸವ ಉಪಸಮಿತಿ ಉಪ ವಿಶೇಷಾಧಿಕಾರಿ ಮುರುಳಿ, ಕಾರ್ಯಾಧ್ಯಕ್ಷ ಕೆ.ಎಲ್. ಸುಭಾಷ್ ಚಂದ್ರ, ಅಧ್ಯಕ್ಷ ಮಾಯಾ ಜಗದೀಶ್, ಕಾರ್ಯದರ್ಶಿ ಕೆ. ಸುರೇಶ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: