ಕರ್ನಾಟಕದೇಶಪ್ರಮುಖ ಸುದ್ದಿ

ಮಾರ್ಚ್ 4-5ರಂದು ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ತಮಿಳುನಾಡು ಕನ್ನಡಿಗರ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಸಾಂಸ್ಕೃತಿಕ ಸಮಾವೇಶವು ಮಾರ್ಚ್ 4-5ರಂದು ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

ಮದ್ರಾಸ್ ವಿವಿ ಕನ್ನಡ ಸಾಹಿತ್ಯ ವಿಭಾಗ ಮತ್ತು ಕನ್ನಡ ಸಾಹಿತ್ಯ ಪರಿಷತ್‍ ತಮಿಳುನಾಡು ಘಟಕ ಸಹಭಾಗಿತ್ವದಲ್ಲಿ ಸಮ್ಮೇಳವನ್ನು ಆಯೋಜಿಸಲಾಗಿದೆ.

ಸಾಹಿತಿ ದೊಡ್ಡರಂಗೇಗೌಡ

ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಪ್ರೊ.ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಮದ್ರಾಸ್ ವಿವಿಯ ಪ್ಲಾಟಿನಂ ಜ್ಯೂಬಿಲಿ ಸಭಾ ಭವನ ಮರೀನಾ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾರ್ಚ್ 4ರ ಬೆಳಗ್ಗೆ 8.30ಕ್ಕೆ ಅಯನಾವರಂನಲ್ಲಿರುವ ಸರ್ವಜ್ಞನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 10.30ಕ್ಕೆ ಮುಖ್ಯ ಸಮಾರಂಭವನ್ನು ಉದ್ಘಾಟಿಸಲಾಗುವುದು.

ವಿಶೇಷ ಅತಿಥಿಗಳಾಗಿ ಕವಿ ಪೇರರಸು ವೈರಮುತ್ತು ಅವರು ಭಾಗವಹಿಸಲಿದ್ದಾರೆ.  ಇದೇ ಸಂದರ್ಭ “ಸಾಮರಸ್ಯ” ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಗುವುದು. ಕನ್ನಡ, ತೆಲುಗು, ತಮಿಳು ಕವಿಗೋಷ್ಠಿಗಳು ನಡೆಯಲಿದ್ದು, ಜರಗನಹಳ್ಳಿ ಶಿವಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಎರಡು ದಿನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದ್ದು, ರುಕ್ಮೋಜಿ ಅವರು ರಾಜಕುಮಾರ್ ಅವರ ಬಗ್ಗೆ ಬರೆದಿರುವ ಪುಸ್ತಕವನ್ನು ನಟ ‘ಸಂಚಾರಿ’ ವಿಜಯ್ ಮತ್ತೊಮ್ಮೆ ಲೋಕಾರ್ಪಣೆ ಮಾಡಲಿದ್ದಾರೆ. ಮಾರ್ಚ್ 5 ರಂದು ಬೆಳಗ್ಗೆ 10ಕ್ಕೆ ಹಾಸ್ಯ ಕಾರ್ಯಕ್ರಮ ನಡೆಯಲಿದೆ. ಅಂದೇ ಎರಡು ದಿನಗಳ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ.

Leave a Reply

comments

Related Articles

error: