ಪ್ರಮುಖ ಸುದ್ದಿ

ಮುಂಬೈನ ವರ್ಲಿ ವಿಧಾನಸಭಾ ಕ್ಷೇತ್ರದಿಂದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಕಣಕ್ಕೆ

ದೇಶ(ಮುಂಬೈ)ಅ.1:- ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಸುಪುತ್ರ ಆದಿತ್ಯ ಠಾಕ್ರೆ  ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮುಂಬೈನ ವರ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಠಾಕ್ರೆ ಕುಟುಂಬದಿಂದ ಚುನಾವಣಾ ರಾಜಕಾರಣಕ್ಕೆ ಇಳಿಯುವ ಮೊದಲ ವ್ಯಕ್ತಿ ಎನಿಸಿಕೊಂಡಿದ್ದಾರೆ.

ಚುನಾವಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಆದಿತ್ಯ ಠಾಕ್ರೆ, ತಾವು ಮುಂಬೈನ ವರ್ಲಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದರು. ಜತೆಗೆ ಎಲ್ಲರ ಆಶೀರ್ವಾದದಿಂದ ತಾವು ಗೆದ್ದೇ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕ್ಷೇತ್ರದಲ್ಲಿ ಈ ಹಿಂದೆ ಶಿವಸೇನೆ ಶಾಸಕರಾಗಿದ್ದ ಸುನಿಲ್ ಶಿಂಧೆ ಅವರು ಆದಿತ್ಯಗಾಗಿ ಸ್ಥಾನವನ್ನು ಬಿಟ್ಟುಕೊಡಲಿದ್ದಾರೆ. ಇದೇ ವೇಳೆ ಈ ಬಾರಿಯ ಚುನಾವಣೆಯಲ್ಲಿ ಶಿವಸೇನಾ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಆದಿತ್ಯ ಠಾಕ್ರೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಿವಸೇನೆ ಹೇಳಿಕೊಂಡಿದೆ.

ಈಗಾಗಲೇ ಬಿಜೆಪಿ-ಶಿವಸೇನೆ ಮೈತ್ರಿಯಲ್ಲಿ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಸಣ್ಣ ಪುಟ್ಟ ಪಕ್ಷಗಳಿಗೂ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ತಿಳಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: