ಪ್ರಮುಖ ಸುದ್ದಿ

ಹರ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ ಕುಸ್ತಿ ಪಟುಗಳು

ದೇಶ(ನವದೆಹಲಿ)ಅ.1:-  ಹರ್ಯಾಣ ವಿಧಾನಸಭಾ ಕ್ಷೇತ್ರಕ್ಕೆ  ಕ್ರೀಡಾ ತಾರೆಗಳಾಗಿರುವ ಬಬಿತಾ ಫೋಗಟ್ ಮತ್ತು ಯೋಗೇಶ್ವರ ದತ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈಗ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಈ ಇಬ್ಬರು ಕುಸ್ತಿ ಪಟುಗಳಿಗೆ ಟಿಕೆಟ್ ದೊರೆತಿದೆ.

ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಮುಖ್ಯಸ್ಥ ಅಮಿತ್ ಶಾ ಮತ್ತು ಹಿರಿಯ ಮುಖಂಡರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮೂರು ಗಂಟೆಗಳ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದರು. ಇದಾದ ಒಂದು ದಿನದ ನಂತರ ಈಗ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.ಈ ಪಟ್ಟಿಯಲ್ಲಿ ಮಂತ್ರಿಗಳಾದ ಬಾದ್‌ಶಾಹಪುರದ ರಾವ್ ನರ್ಬೀರ್ ಸಿಂಗ್ ಮತ್ತು ಫರಿದಾಬಾದ್‌ನ ವಿಪುಲ್ ಗೋಯಲ್ ಅವರಿಗೆ ಟಿಕೆಟ್ ಲಭಿಸಿಲ್ಲ ಎನ್ನಲಾಗಿದೆ. (ಎಸ್.ಎಚ್)

Leave a Reply

comments

Related Articles

error: