
ಮೈಸೂರು
ದಸರಾ ಮಹೋತ್ಸದ ಹಿನ್ನೆಲೆ : ಹೊರ ರಾಜ್ಯದಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ
ಮೈಸೂರು,ಅ.1:- ದಸರಾ ಮಹೋತ್ಸದ ಹಿನ್ನೆಲೆಯಲ್ಲಿ ಹೊರ ರಾಜ್ಯದಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಹೆಚ್ಚಿನ ಪ್ರಮಾಣದ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಮೋಟಾರು ಕಾಯಿದೆಯಡಿ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಕ್ಟೋಬರ್ 9ರವರೆಗೆ ಮೈಸೂರಿಗೆ ಬರುವ ಪ್ರವಾಸಿಗರ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದ್ದು, ಬೇರೆ ರಾಜ್ಯದಲ್ಲಿ ನೋಂದಾಯಿಸಿಕೊಂಡು ಅಲ್ಲಿ ತೆರಿಗೆ ಪಾವತಿ ಮಾಡುತ್ತಿರುವ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ.
ಕೇಂದ್ರ ರಹದಾರಿ ಪರವಾನಗಿ ಪಡೆದುಕೊಂಡಿರುವ ವಾಹನಗಳು ಮೈಸೂರಿಗೆ ಬರಲು ತೆರಿಗೆ ಕಟ್ಟುವಂತಿಲ್ಲ. (ಕೆ.ಎಸ್,ಎಸ್.ಎಚ್)