ಪ್ರಮುಖ ಸುದ್ದಿ

ಭೀಕರ ಅಪಘಾತದಲ್ಲಿ ಕೊಡಗಿನ ನಾಲ್ವರ ಸಾವು : ಸುಳ್ಯ ಬಳಿ ಘಟನೆ

ರಾಜ್ಯ( ಮಡಿಕೇರಿ) ಅ.2 :- ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅವಘಡದಲ್ಲಿ ಕೊಡಗಿನ ಕೊಟ್ಟಮುಡಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ನಡೆದಿದೆ.

ಮೃತರನ್ನು ನಾಪೋಕ್ಲು ಸಮೀಪದ ಕೊಟ್ಟಮುಡಿಯ ಹಚ್ಚಯಾ ಹಾಜಿ(80), ಇಬ್ರಾಹಿಂ(45), ಅಬ್ದುಲ್ ರೆಹಮಾನ್ (50) ಹಾಗೂ ಹ್ಯಾರಿಸ್(45) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಉಮ್ಮರ್ ಫಾರೂಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ಸಮೀಪದ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಸ್ವಿಫ್ಟ್ ಕಾರು ಹಾಗೂ ಲಾರಿ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದರು. ಮಂಗಳೂರಿನಿಂದ ಕೊಡಗಿನತ್ತ ಕಾರಿನಲ್ಲಿ ಐವರು ಬರುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: